ಬೆಂಗಳೂರು.
ಮೇ 30: ರಾಜ್ಯದ ಕಾರ್ಮಿಕರ ಆರ್ಥಿಕ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯದ ಉದ್ದೇಶದಿಂದ ಕರ್ನಾಟಕ ಸರ್ಕಾರವು ಕನಿಷ್ಠ ವೇತನವನ್ನು ಶೇ.60ರವರೆಗೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ವೇತನ ಪರಿಷ್ಕರಣೆ ರಾಜ್ಯದ 81 ವಿವಿಧ ವಲಯಗಳ ಕಾರ್ಮಿಕರಿಗೆ ಅನ್ವಯವಾಗಲಿದೆ.
ಸರ್ಕಾರದ ಪ್ರಕಟಣೆಯ ಪ್ರಕಾರ, ಈ ಕ್ರಮದಿಂದ ಸಂಘಟಿತ ಹಾಗೂ ಅಸಂಘಟಿತ ವಲಯಗಳ ಲಕ್ಷಾಂತರ ಕಾರ್ಮಿಕರಿಗೆ ನೇರ ಪ್ರಯೋಜನವಾಗಲಿದೆ. ಬೆಂಗಳೂರಿನಲ್ಲಿ ಅಕುಶಲ ಕಾರ್ಮಿಕರ ಕನಿಷ್ಠ ಮಾಸಿಕ ವೇತನವನ್ನು ₹23,376ಕ್ಕೆ ನಿಗದಿಪಡಿಸಲಾಗಿದ್ದು, ಹೆಚ್ಚಿನ ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ಮಾಸಿಕ ₹31,114ರವರೆಗೆ ವೇತನ ದೊರೆಯಲಿದೆ.
ಹೊಸ ಅಧಿಸೂಚನೆಯ ಮತ್ತೊಂದು ಪ್ರಮುಖ ಅಂಶವೆಂದರೆ ವೇತನ ರಚನೆಯಲ್ಲಿ ಲಿಂಗ ಅಸಮಾನತೆಯನ್ನು ನಿವಾರಿಸುವ ಕ್ರಮ. ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಸಮಾನ ವೇತನದ ಅವಕಾಶ ಕಲ್ಪಿಸುವ ಮೂಲಕ ಸಮಾನತೆಯ ತತ್ವವನ್ನು ಮತ್ತಷ್ಟು ಬಲಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಕಾರ್ಮಿಕರ ಗೌರವಯುತ ಜೀವನ, ಸಾಮಾಜಿಕ ನ್ಯಾಯ ಹಾಗೂ ಸಮಾನ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವೇತನ ಹೆಚ್ಚಳದಿಂದ ಕಾರ್ಮಿಕರ ಜೀವನಮಟ್ಟ ಸುಧಾರಿಸುವುದರ ಜೊತೆಗೆ ರಾಜ್ಯದ ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿಯೂ ಧನಾತ್ಮಕ ಪರಿಣಾಮ ಉಂಟಾಗುವ ನಿರೀಕ್ಷೆಯಿದೆ.
ನ್ಯೂ ವಿಜಯ ನ್ಯೂಸ್
ಸತ್ಯ... ನೇರ... ನಿರಂತರ
إرسال تعليق