⚡ಟ್ರೆಂಡಿಂಗ್

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಮಾನ್ಯ ಇಲಾಖಾ ಸಚಿವರಿಂದ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಶ್ರೀ ಸಂತೋಷ್ ಕುಮಾರ್ ಆದರ್ಶ್ ಗೌಡ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾಯ್ದೆ, 2005 ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಯಮಗಳು, 2010ರ ಅನ್ವಯ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಮಕ್ಕಳ ಹಕ್ಕುಗಳ ರಕ್ಷಣೆ, ಕಲ್ಯಾಣ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ನೇಮಕ ಮಾಡಲಾಗಿದೆ.

ಅಧಿಸೂಚನೆ ಪ್ರಕಾರ, ಶ್ರೀ ಸಂತೋಷ್ ಕುಮಾರ್ ಆದರ್ಶ್ ಗೌಡ ಅವರು 2026ರ ಮೇ 27ರಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ರಾಜ್ಯದ ಮಕ್ಕಳ ಹಕ್ಕುಗಳ ಸಂರಕ್ಷಣೆ, ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷತೆಯ ವಿಚಾರಗಳಲ್ಲಿ ಆಯೋಗದ ಪಾತ್ರ ಮಹತ್ವದ್ದಾಗಿದ್ದು, ಹೊಸ ಅಧ್ಯಕ್ಷರ ನೇಮಕದಿಂದ ಆಯೋಗದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
– ನ್ಯೂ ವಿಜಯ ನ್ಯೂಸ್

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...