ಧಾರವಾಡ: ಧಾರವಾಡ ಜಿಲ್ಲಾಸ್ಪತ್ರೆ ರಸ್ತೆಯಲ್ಲಿರುವ ಮಾಜಿ ಕಮಿಷ್ನರ್ ಉಮಾಪತಿ ಅವರ ನಿವಾಸದ ಎದುರು ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮನೆಯ ಮುಂದೆ ನಂಬರ್ ಪ್ಲೇಟ್ ಇಲ್ಲದ ಕಾರೊಂದು ಹಲವು ದಿನಗಳಿಂದ ಪಾರ್ಕ್ ಮಾಡಲಾಗಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಧಾರವಾಡ ಸಂಚಾರಿ ಪೊಲೀಸ್ ಹಾಗೂ ಉಪನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ಪರಿಶೀಲಿಸಿದ್ದಾರೆ.
ಪ್ರಾಥಮಿಕ ತನಿಖೆಯ ಬಳಿಕ ನಂಬರ್ ಪ್ಲೇಟ್ ಇಲ್ಲದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಸಾಗಿಸಿದ್ದಾರೆ. ವಾಹನದ ಮಾಲೀಕ ಯಾರು, ಯಾವ ಕಾರಣಕ್ಕಾಗಿ ಕಾರನ್ನು ಅಲ್ಲಿಯೇ ಬಿಟ್ಟು ಹೋಗಲಾಗಿದೆ ಹಾಗೂ ಇದರ ಹಿಂದೆ ಯಾವುದೇ ಅನುಮಾನಾಸ್ಪದ ಉದ್ದೇಶವಿದೆಯೇ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ತನಿಖೆಯ ನಂತರವೇ ವಾಹನದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Post a Comment