⚡ಟ್ರೆಂಡಿಂಗ್

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ: ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಮಾನ್ಯ ಡಿ.ಕೆ. ಶಿವಕುಮಾರ ಅವರು ಸರ್ವಾನುಮತದಿಂದ ಆಯ್ಕೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಶ್ರೀ ರಜತ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ನಗರದ ಗೋಕುಲ್ ಗಾರ್ಡನ್ ಸಮೀಪದ ಅಕ್ಷಯ್ ಪಾರ್ಕ್‌ನಲ್ಲಿ ಭವ್ಯ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಡಿ.ಕೆ. ಶಿವಕುಮಾರ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಜನಪರ ಆಡಳಿತ ಮತ್ತಷ್ಟು ಬಲವಾಗಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಂಡರು. ಡಿ.ಕೆ. ಶಿವಕುಮಾರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಕಾರ್ಯಕರ್ತರು, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸಂಘಟಿತವಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ನ್ಯೂ ವಿಜಯ ನ್ಯೂಸ್
"ಜನರ ಧ್ವನಿ – ಜನರ ಸುದ್ದಿ"

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...