⚡ಟ್ರೆಂಡಿಂಗ್

ನ್ಯೂ ವಿಜಯ ನ್ಯೂಸ್ | ಬ್ರೇಕಿಂಗ್ ನ್ಯೂಸ್"ಸರ್ಕಾರ ರಚನೆಗೆ ಡಿ.ಕೆ. ಶಿವಕುಮಾರರಿಗೆ ರಾಜ್ಯಪಾಲರ ಆಹ್ವಾನ"

ಸರ್ಕಾರ ರಚಿಸಲು ಡಿ.ಕೆ. ಶಿವಕುಮಾರರಿಗೆ ರಾಜ್ಯಪಾಲರಿಂದ ಆಹ್ವಾನ

ಬೆಂಗಳೂರು, ಮೇ 30: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಮಹತ್ವದ ಬೆಳವಣಿಗೆಯಾಗಿ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ ಅವರಿಗೆ ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ.

ರಾಜಭವನದಲ್ಲಿ ನಡೆದ ಭೇಟಿಯ ವೇಳೆ ಕಾಂಗ್ರೆಸ್ ನಿಯೋಗವು ಸರ್ಕಾರ ರಚನೆಗೆ ಅಗತ್ಯ ಬೆಂಬಲ ಹೊಂದಿರುವುದಾಗಿ ರಾಜ್ಯಪಾಲರಿಗೆ ಮಾಹಿತಿ ನೀಡಿತು. ಬಳಿಕ ರಾಜ್ಯಪಾಲರು ಡಿ.ಕೆ. ಶಿವಕುಮಾರ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿ, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರು ಉಪಸ್ಥಿತರಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 3ರಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...