⚡ಟ್ರೆಂಡಿಂಗ್

ದಾಂಡೇಲಿಯಲ್ಲಿ ಬಿಜೆಪಿ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ

ದಾಂಡೇಲಿ: ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ದಾಂಡೇಲಿಯಲ್ಲಿ ಇಂದು ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ತರಬೇತಿ, ಪಕ್ಷದ ಸಿದ್ಧಾಂತಗಳು ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯಿತು. ಪಕ್ಷದ ಹಿರಿಯ ನಾಯಕರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಶಾಸಕರಾದ ಶ್ರೀ ಅಮೃತ ದೇಸಾಯಿ, ಮಾಜಿ ಶಾಸಕಿ ಶ್ರೀಮತಿ ಸೀಮಾ ಮಸೂತಿ, ಶ್ರೀ ನಾಗರಾಜ್ ಛಬ್ಬಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತರಬೇತಿ ಶಿಬಿರದಲ್ಲಿ ಭಾಗವಹಿಸಿದ ಕಾರ್ಯಕರ್ತರು ಪಕ್ಷದ ವಿಚಾರಧಾರೆ, ಜನಸಂಪರ್ಕ ಹಾಗೂ ಸಂಘಟನಾ ಕೌಶಲ್ಯಗಳ ಕುರಿತು ವಿಶೇಷ ಮಾಹಿತಿ ಪಡೆದುಕೊಂಡರು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
J
ನ್ಯೂ ವಿಜಯ ನ್ಯೂಸ್ ✍️
ದಾಂಡೇಲಿ ವರದಿ

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...