ಡಿ.ಕೆ. ಶಿವಕುಮಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತ ಘೋಷಣೆ
ಬೆಂಗಳೂರು, ಮೇ 30: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲೆ ಹಾಗೂ ಪಕ್ಷದ ಎಲ್ಲಾ ಶಾಸಕರು ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಸಕರು ಏಕಮತದಿಂದ ಡಿ.ಕೆ. ಶಿವಕುಮಾರ ಅವರ ಹೆಸರನ್ನು ಬೆಂಬಲಿಸಿದ್ದು, ನಾಯಕತ್ವ ಬದಲಾವಣೆಗೆ ಅಧಿಕೃತ ಮುದ್ರೆ ಬಿದ್ದಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ನೇತೃತ್ವವನ್ನು ಡಿ.ಕೆ. ಶಿವಕುಮಾರ ವಹಿಸುವ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ನಡೆದ ಈ ಸಭೆ ರಾಜ್ಯ ರಾಜಕೀಯದಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದ್ದು, ಪಕ್ಷದ ನಾಯಕರು ಡಿ.ಕೆ. ಶಿವಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿದರು.
ಸಭೆಯ ಬಳಿಕ ಮಾತನಾಡಿದ ಹಲವು ಶಾಸಕರು, ಡಿ.ಕೆ. ಶಿವಕುಮಾರ ಅವರ ನಾಯಕತ್ವದಲ್ಲಿ ಪಕ್ಷ ಮತ್ತು ಸರ್ಕಾರ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Post a Comment