⚡ಟ್ರೆಂಡಿಂಗ್

ಹುಬ್ಬಳ್ಳಿ: ಕೆಜಿಪಿ ಫೌಂಡೇಶನ್‌ನಿಂದ ಬೃಹತ್ ಉದ್ಯೋಗ ಮೇಳ – 10 ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗಿ, ಶ್ರೀಗಂಧ ಶೇಟ್ ಕಾರ್ಯಕ್ಕೆ ಮೆಚ್ಚುಗೆ


ಹುಬ್ಬಳ್ಳಿ: ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕೆಜಿಪಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ ವ್ಯಕ್ತವಾಯಿತು. ಈ ಉದ್ಯೋಗ ಮೇಳದಲ್ಲಿ 10 ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಹುಡುಕಿದರು.

ವಿವಿಧ ಕ್ಷೇತ್ರಗಳ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡು ಅರ್ಹ ಅಭ್ಯರ್ಥಿಗಳ ಸಂದರ್ಶನ ನಡೆಸಿದವು. ಶಿಕ್ಷಣ, ತಾಂತ್ರಿಕ, ಕೈಗಾರಿಕಾ, ಸೇವಾ ವಲಯ ಸೇರಿದಂತೆ ಹಲವು ಕ್ಷೇತ್ರಗಳ ಉದ್ಯೋಗ ಅವಕಾಶಗಳ ಬಗ್ಗೆ ಯುವಕರಿಗೆ ಮಾಹಿತಿ ನೀಡಲಾಯಿತು.

ಕೆಜಿಪಿ ಫೌಂಡೇಶನ್ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀಗಂಧ ಶೇಟ್ ಅವರ ಈ ಪ್ರಯತ್ನಕ್ಕೆ ಸಾರ್ವಜನಿಕರು ಹಾಗೂ ಯುವ ಸಮುದಾಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು. ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಕರಿಗೆ ಒಂದೇ ವೇದಿಕೆಯಲ್ಲಿ ಹಲವು ಅವಕಾಶಗಳನ್ನು ಒದಗಿಸುವ ಕಾರ್ಯ ಶ್ಲಾಘನೀಯ ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

“ಯುವಕರಿಗೆ ಉದ್ಯೋಗ ಸಿಗಬೇಕು, ಅವರ ಕುಟುಂಬಗಳು ಆರ್ಥಿಕವಾಗಿ ಬಲವಾಗಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದೆಯೂ ಸಮಾಜಮುಖಿ ಕಾರ್ಯಗಳು ಮುಂದುವರಿಯಲಿವೆ,” ಎಂದು ಆಯೋಜಕರು ತಿಳಿಸಿದರು.

ಉದ್ಯೋಗ ಮೇಳದ ಯಶಸ್ವಿ ಆಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ಭಾಗದ ಸಾವಿರಾರು ಯುವಕರಲ್ಲಿ ಹೊಸ ಭರವಸೆ ಮೂಡಿದ್ದು, ಕೆಜಿಪಿ ಫೌಂಡೇಶನ್‌ನ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...