⚡ಟ್ರೆಂಡಿಂಗ್

ಹುಬ್ಬಳ್ಳಿ-ಧಾರವಾಡ 24/7 ನೀರು ಪೂರೈಕೆಯಲ್ಲಿ ವ್ಯತ್ಯಯ: ಸವದತ್ತಿ ಜಾಕ್‌ವೆಲ್‌ಗೆ ಮಹಾಪೌರರು ಭೇಟಿ, ತುರ್ತು ದುರಸ್ತಿಗೆ ಸೂಚನೆ



ಹುಬ್ಬಳ್ಳಿ-ಧಾರವಾಡ: ಅವಳಿನಗರದ ಕೆಲವು ಪ್ರದೇಶಗಳಲ್ಲಿ 24/7 ಕುಡಿಯುವ ನೀರಿನ ಪೂರೈಕೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಮಣ್ಣಿನ ಅಂಶ ಕಂಡುಬಂದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನೀರು ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ಉಪ ಮಹಾಪೌರರಾದ ಶ್ರೀ ಸಂತೋಷ ಚವ್ಹಾಣ ಹಾಗೂ ಪಾಲಿಕೆ ಆಯುಕ್ತರಾದ ಶ್ರೀ ರುದ್ರೇಶ್ ಘಾಳಿ ಅವರು ಸವದತ್ತಿಯ ಜಾಕ್‌ವೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀರು ಸರಬರಾಜು ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ದುರಸ್ತಿ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ಹಗಲಿರುಳು ನಡೆಸಿ ಶೀಘ್ರ ಪೂರ್ಣಗೊಳಿಸುವಂತೆ ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸೂಚನೆ ನೀಡಿದರು.

ಅವಳಿನಗರದ ನಾಗರಿಕರಿಗೆ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರು ಒದಗಿಸುವುದು ಪಾಲಿಕೆಯ ಪ್ರಮುಖ ಆದ್ಯತೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ನಂತರವೇ ನೀರಿನ ಪೂರೈಕೆ ಪುನರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರಸ್ತುತ ದುರಸ್ತಿ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ 24/7 ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಪಾಲಿಕೆ ತಿಳಿಸಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

– ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...