⚡ಟ್ರೆಂಡಿಂಗ್

ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ-2 ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಬಾಬಣ್ಣ ಹುಕ್ಕೇರಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ವಿಶೇಷ ಪ್ರತಿನಿಧಿ-2 ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದ ಮೂಲಕ ಪ್ರಕಾಶ್ ಹುಕ್ಕೇರಿ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ. ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಅವರು, ಸಚಿವರಾಗಿ, ಸಂಸದರಾಗಿಯೂ ಸೇವೆ ಸಲ್ಲಿಸಿದ್ದು, ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳು, ನೀತಿಗಳು ಹಾಗೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಮನ್ವಯ ಸಾಧಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕಾಶ್ ಹುಕ್ಕೇರಿ ಅವರ ನೇಮಕದಿಂದ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳಲ್ಲಿ ಸಂತಸ ವ್ಯಕ್ತವಾಗಿದ್ದು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರ ಅನುಭವ ಮತ್ತಷ್ಟು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ನ್ಯೂ ವಿಜಯ ನ್ಯೂಸ್ ವರದಿ

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...