⚡ಟ್ರೆಂಡಿಂಗ್

ಅಮೃತ್ ಯೋಜನೆಯಡಿ ಮಾಸ್ಟರ್ ಪ್ಲಾನ್ ಪರಿಷ್ಕರಣೆ-3: ವಲಯ ನಿಯಮಾವಳಿ ಪರಿಷ್ಕರಣೆಗೆ ಸಲಹಾ ಸಭೆ

ಹುಬ್ಬಳ್ಳಿ-ಧಾರವಾಡ: ಅಮೃತ್ ಯೋಜನೆಯಡಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಮಾಸ್ಟರ್ ಪ್ಲಾನ್ ಪರಿಷ್ಕರಣೆ-3ಕ್ಕೆ ಸಂಬಂಧಿಸಿದಂತೆ ವಲಯ ನಿಯಮಾವಳಿಗಳ ಪರಿಷ್ಕರಣೆ ಕುರಿತು ವಿವಿಧ ಇಲಾಖೆಗಳು ಹಾಗೂ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಲಹಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಅಭಿವೃದ್ಧಿ), ಉಪನಿರ್ದೇಶಕರು ನಗರ ಯೋಜನೆ, ಆರ್ಕಿಟೆಕ್ಚರ್ ಅಸೋಸಿಯೇಷನ್, ಇಂಜಿನಿಯರ್ ಅಸೋಸಿಯೇಷನ್ ಹಾಗೂ ಸಿವಿಲ್ ಕಾಂಟ್ರಾಕ್ಟರ್‌ಗಳ ಪ್ರತಿನಿಧಿಗಳಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆದುಕೊಳ್ಳಲಾಯಿತು.

ನಗರದ ಭವಿಷ್ಯದ ಅಭಿವೃದ್ಧಿ, ಸುಗಮ ಯೋಜನೆ ರೂಪಣೆ, ಕಟ್ಟಡ ನಿರ್ಮಾಣ ನಿಯಮಗಳು ಹಾಗೂ ವಲಯ ನಿಯಮಾವಳಿಗಳ ಸುಧಾರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರ ಯೋಜಕ ಸದಸ್ಯರು ಹಾಗೂ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. 

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...