⚡ಟ್ರೆಂಡಿಂಗ್

ಧಾರವಾಡ ಜಿಲ್ಲೆಯಲ್ಲಿ ರೌಡಿ ಸ್ಕ್ವಾಡ್ ದಾಳಿ: 47 ರೌಡಿ ಶೀಟರ್‌ಗಳ ಮನೆ ಪರಿಶೀಲನೆ, ಖಡಕ್ ಎಚ್ಚರಿಕೆ

ಧಾರವಾಡ: ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದೆ.

ಜೂನ್ 10ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪಟ್ಟಣ ಹಾಗೂ ಗ್ರಾಮಗಳಲ್ಲಿ ರೌಡಿ ಸ್ಕ್ವಾಡ್ ತಂಡಗಳು ರೌಡಿ ಶೀಟರ್‌ಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದವು. ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಧಾರವಾಡ ಗ್ರಾಮೀಣ ವಿಭಾಗದ ಡಿ.ಎಸ್.ಪಿ., ಸಿ.ಪಿ.ಐ., ಪಿ.ಐ., ಪಿ.ಎಸ್.ಐ. ಹಾಗೂ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪರಿಶೀಲನೆಯ ವೇಳೆ ರೌಡಿ ಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರಗಳಿಗಾಗಿ ತಪಾಸಣೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲ್ತಿಕೋಟಿ ಗ್ರಾಮದ ಒಬ್ಬ ರೌಡಿ ಶೀಟರ್ ಮನೆಯಲ್ಲಿ ಸಾಗವಾನಿ ಮರದ ಬಡ್ಡಿ ಹಾಗೂ ಸೀಸಂ ಕಟ್ಟಿಗೆಯ ತುಂಡುಗಳು ಪತ್ತೆಯಾಗಿವೆ. 

ಅವುಗಳಿಗೆ ಸಂಬಂಧಿಸಿದ ಯಾವುದೇ ದಾಖಲಾತಿಗಳು ಲಭ್ಯವಿರದ ಕಾರಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟಾರೆ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 47 ರೌಡಿ ಶೀಟರ್‌ಗಳ ಮನೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ರೌಡಿ ಶೀಟರ್‌ಗಳಿಗೆ ಕಾನೂನು ಪಾಲನೆ ಕುರಿತು ತಿಳುವಳಿಕೆ ನೀಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವರದಿ: ನ್ಯೂ ವಿಜಯ ನ್ಯೂಸ್ 

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...