⚡ಟ್ರೆಂಡಿಂಗ್

5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್

ಬೆಂಗಳೂರು (ನ್ಯೂ ವಿಜಯ ನ್ಯೂಸ್): ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಿಟಿ ಸಿವಿಲ್ ಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸಿಟಿ ಸಿವಿಲ್ ಕೋರ್ಟ್ 54ರ ಪಬ್ಲಿಕ್ ಪ್ರಾಸಿಕ್ಯೂಟರ್ ಸವಿತಾ ನವೀನ್ ಪಾಟೀಲ್ ಅವರು ಮಂಜುನಾಥ್ ಎಂಬುವರ ಬಳಿ ₹5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು.

ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಸವಿತಾ ನವೀನ್ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣ ಸಮೇತ ಕ್ರಮ ಕೈಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಕಾರ್ಯಾಚರಣೆ ಮುಂದುವರಿದಿದ್ದು, ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇಂತಹ ದಾಳಿಗಳು ಮಹತ್ವ ಪಡೆದಿವೆ.

ವರದಿ: ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...