⚡ಟ್ರೆಂಡಿಂಗ್

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲದ ವಿರುದ್ಧ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹8 ಕೋಟಿ ಮೌಲ್ಯದ ಮಾದಕ ವಸ್ತು ವಶ – 23 ಆರೋಪಿಗಳ ಬಂಧನ


ಬೆಂಗಳೂರು: ಮಾದಕ ವಸ್ತುಗಳ ಕಳ್ಳಸಾಗಣೆ ಹಾಗೂ ಅಕ್ರಮ ಮಾರಾಟ ಜಾಲದ ವಿರುದ್ಧ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 23 ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಮಾದಕ ವಸ್ತು ನಿಯಂತ್ರಣ ವಿಭಾಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗಳ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಮಾದಕ ವಸ್ತು ಪೂರೈಕೆ ಜಾಲಕ್ಕೆ ದೊಡ್ಡ ಹೊಡೆತ ನೀಡಿವೆ.

ಕಾರ್ಯಾಚರಣೆಯ ವೇಳೆ ಸುಮಾರು ₹8 ಕೋಟಿ ಮೌಲ್ಯದ ನೈಸರ್ಗಿಕ ಮಾದಕ ವಸ್ತುಗಳು, ಸಿಂಥೆಟಿಕ್ ಸೈಕೋಸ್ಟಿಮ್ಯುಲಾಂಟ್ಸ್, ನಿಷೇಧಿತ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತುಗಳ ಮೂಲ, ಪೂರೈಕೆ ಸರಪಣಿ ಹಾಗೂ ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚುವ ಉದ್ದೇಶದಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಮಾದಕ ವಸ್ತುಗಳ ಪಿಡುಗನ್ನು ತಡೆಯಲು ಕರ್ನಾಟಕ ಸರ್ಕಾರ ಕಠಿಣ ಕಾನೂನು ಜಾರಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಯುವಜನರನ್ನು ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ರಕ್ಷಿಸುವುದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಪ್ರಮುಖ ಆದ್ಯತೆಯಾಗಿದ್ದು, ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಲಾಗಿದೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...