⚡ಟ್ರೆಂಡಿಂಗ್

ಧಾರವಾಡದಲ್ಲಿ ಮಹಿಳಾ ಸ್ಪಂದನ ಸಭೆ: ಮಹಿಳೆಯರ ಅಹವಾಲುಗಳಿಗೆ ತ್ವರಿತ ಸ್ಪಂದನೆ

ಧಾರವಾಡ.
(ನ್ಯೂ ವಿಜಯ ನ್ಯೂಸ್): ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ಡಾ. ನಾಗಲಕ್ಷ್ಮಿ ಅವರ ನೇತೃತ್ವದಲ್ಲಿ ‘ಮಹಿಳಾ ಸ್ಪಂದನ’ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ತಮ್ಮ ವೈಯಕ್ತಿಕ, ಸಾಮಾಜಿಕ ಹಾಗೂ ಕೌಟುಂಬಿಕ ಸಮಸ್ಯೆಗಳನ್ನು ಮುಕ್ತವಾಗಿ ಮಂಡಿಸಿದರು. ಮಹಿಳೆಯರು ಎದುರಿಸುತ್ತಿರುವ ವಿವಿಧ ತೊಂದರೆಗಳು, ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟ ಹಾಗೂ ಸರ್ಕಾರಿ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅವರು ಮಹಿಳೆಯರ ಪ್ರತಿಯೊಂದು ಅಹವಾಲನ್ನು ಗಮನವಿಟ್ಟು ಆಲಿಸಿ, ಸಮಸ್ಯೆಗಳ ಗಂಭೀರತೆಯನ್ನು ಅರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಂಡು ಬಗೆಹರಿಸುವಂತೆ ಸೂಚನೆ ನೀಡಿದರು. ಮಹಿಳೆಯರಿಗೆ ನ್ಯಾಯ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕ ಮಹಿಳೆಯರು ಭಾಗವಹಿಸಿದ್ದರು. ಮಹಿಳೆಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಭೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು.

– ನ್ಯೂ ವಿಜಯ ನ್ಯೂಸ್

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...