ಬೆಂಗಳೂರು: ರಾಜ್ಯದ 25 ನೆ ಮುಖ್ಯಮಂತ್ರಿ ಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಅವರ ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗಿದೆ
ಪಟ್ಟಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ, ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಉಲ್ಲೇಖಿಸಲಾಗಿದೆ. ಜೊತೆಗೆ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಅವರ ಹೆಸರುಗಳು ಸಚಿವರ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.
ಈ ಪಟ್ಟಿ ಹೊರಬಂದ ನಂತರ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ.
ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಈ ಪಟ್ಟಿ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.
Post a Comment