⚡ಟ್ರೆಂಡಿಂಗ್

ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ದೀಪಕ್ ಚಿಂಚೋರೆ ಆಗ್ರಹ

ಧಾರವಾಡ: ನೂತನ ಮಂತ್ರಿಮಂಡಲದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಸಚಿವ ಸ್ಥಾನ ನೀಡಬೇಕು ಎಂದು AICC ಸದಸ್ಯರು ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ್ ಚಿಂಚೋರೆ ಅವರು ಆಗ್ರಹಿಸಿದರು.

ಧಾರವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ಜನರ ಬೆಂಬಲ ಪ್ರಮುಖ ಪಾತ್ರ ವಹಿಸಿದೆ. ಪಕ್ಷಕ್ಕೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಸಮುದಾಯಗಳಿಗೆ ಸರ್ಕಾರದಲ್ಲಿ ಸಮರ್ಪಕ ಪ್ರತಿನಿಧಿತ್ವ ಸಿಗಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಜನಪ್ರಿಯ ಮುಖಂಡರಾದ ಶ್ರೀ ಜಮೀರ್ ಅಹ್ಮದ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು. ಜನಸಂಖ್ಯೆ ಹಾಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ನೂತನ ಮಂತ್ರಿಮಂಡಲದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಅಗತ್ಯವಾಗಿದೆ ಎಂದು ದೀಪಕ್ ಚಿಂಚೋರೆ ಒತ್ತಾಯಿಸಿದರು.

ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಕಾಂಗ್ರೆಸ್ ಪಕ್ಷದ ಮೂಲ ಶಕ್ತಿಯಾಗಿದ್ದು, ಅವರ ವಿಶ್ವಾಸ ಮತ್ತು ಕೊಡುಗೆಯನ್ನು ಪರಿಗಣಿಸಿ ರಾಜ್ಯ ನಾಯಕತ್ವ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...