ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪೋಕ್ಸೊ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ನೀಡುವ ವೇಳೆ ವಿಧಿಸಲಾಗಿದ್ದ ಪ್ರಯಾಣ ಸಂಬಂಧಿತ ಷರತ್ತನ್ನು ಸಡಿಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಈ ನಿರ್ಬಂಧದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸಂಚರಿಸಲು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೊಂದರೆಯಾಗುತ್ತಿದೆ ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಈ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಜಾಮೀನು ಷರತ್ತಿನಲ್ಲಿ ಸಡಿಲಿಕೆ ನೀಡಿದೆ. ಇದರಿಂದ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯದ ಒಳಗೆ ಸಂಚರಿಸಲು ಅವಕಾಶ ಸಿಕ್ಕಂತಾಗಿದೆ.
ಆದರೆ ಪ್ರಕರಣದ ವಿಚಾರಣೆ ಮುಂದುವರಿಯಲಿದ್ದು, ನ್ಯಾಯಾಲಯ ವಿಧಿಸಿರುವ ಇತರ ಷರತ್ತುಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.
ನ್ಯೂ ವಿಜಯ ನ್ಯೂಸ್ ವರದಿ
Post a Comment