ಗದಗ: ಭಾರತದ ಪ್ರಧಾನಮಂತ್ರಿಗಳಾಗಿ ಸುದೀರ್ಘ 4399 ದಿನಗಳ ಆಡಳಿತ ಪೂರೈಸಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಅತಿ ದೀರ್ಘಾವಧಿ ಚುನಾಯಿತ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಗದಗ ನಗರದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶ ಸೇವೆಯ ಮುಂದುವರಿಕೆಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸಿ.ಸಿ. ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ದೇಶದ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಕಾರ್ಯಗಳನ್ನು ಸ್ಮರಿಸಿದ ಮುಖಂಡರು, ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Post a Comment