⚡ಟ್ರೆಂಡಿಂಗ್

ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮತಯಾಚನೆ


ಹುಬ್ಬಳ್ಳಿ: ವಿಧಾನ ಪರಿಷತ್ ಕಾಂಗ್ರೆಸ್ ಪದವೀಧರ ಕ್ಷೇತ್ರದ ಅಭ್ಯರ್ಥಿ ಶ್ರೀ ಮೋಹನ ಲಿಂಬಿಕಾಯಿ ಅವರು ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ಸಾನಾ ಶಿಕ್ಷಣ ಸಮುಚ್ಚಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಪ್ರಾಧ್ಯಾಪಕರನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಮ್ಮ ಪರ ಬೆಂಬಲ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪ್ರಾಧ್ಯಾಪಕರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರೊಂದಿಗೆ ಸಂವಾದ ನಡೆಸಿದ ಅವರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಾನ್ಯ ಶ್ರೀ ಮಳಗಿ, ನಿರ್ದೇಶಕರಾದ ಶ್ರೀ ಮುಲ್ಲಾ ಅಶ್ರಫ್ ಅಲಿ ಅಬ್ದುಲ್ ಮನಸಗಿ, ಶ್ರೀ ಸವಣೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಶಿಕ್ಷಕ ಸಮುದಾಯದವರು ಮುಂಬರುವ ಪದವೀಧರರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾಯಾ, ವಾಚಾ, ಮನಸಾ ಶ್ರಮಿಸುವುದಾಗಿ ಭರವಸೆ ನೀಡಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...