⚡ಟ್ರೆಂಡಿಂಗ್

ನೂತನ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ದೀಪಕ್ ಚಿಂಚೋರೆ ಪಾದಯಾತ್ರೆ

ನೂತನ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ದೀಪಕ್ ಚಿಂಚೋರೆ ಪಾದಯಾತ್ರೆ

ಹುಬ್ಬಳ್ಳಿ: ನೂತನ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ್ ಚಿಂಚೋರೆ ಅವರ ನೇತೃತ್ವದಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರು ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ಪಕ್ಷದ ಸಂಘಟನೆ ಹಾಗೂ ಒಗ್ಗಟ್ಟಿನ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಬೂತ್ ಮಟ್ಟದ ತಳಮಟ್ಟದ ಕಾರ್ಯಕರ್ತರು, ಏಜೆಂಟರು, ಕ್ಷೇತ್ರದ ಗ್ಯಾರಂಟಿ ಸಮಿತಿ ಸದಸ್ಯರು, ಪಾಲಿಕೆ ಸದಸ್ಯರು ಹಾಗೂ ಆಶ್ರಯ ಸಮಿತಿ ಸದಸ್ಯರು ದೀಪಕ್ ಚಿಂಚೋರೆ ಅವರಿಗೆ ಸಾಥ್ ನೀಡಿದರು.

ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ವರದಿ: ನ್ಯೂ ವಿಜಯ ನ್ಯೂಸ್
ಸತ್ಯ....ನೇರ....ನಿರಂತರ

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...