⚡ಟ್ರೆಂಡಿಂಗ್

ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗೆ ವಿಶೇಷ ಸಭೆ: ಸಮಸ್ಯೆ ಆಲಿಸಿದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು


ಧಾರವಾಡ: ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಶ್ರೇಯೋಭಿವೃದ್ಧಿ ಮತ್ತು ಅವರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಈ ಸಭೆಯು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀ ಪಿ. ರಘು ಅವರ ನೇತೃತ್ವದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರೊಂದಿಗೆ ನೇರ ಸಂವಾದ ನಡೆಸಿದ ಆಯೋಗದ ಅಧ್ಯಕ್ಷರು, ಕಾರ್ಮಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಉದ್ಯೋಗ ಭದ್ರತೆ, ಆರೋಗ್ಯ ಸೌಲಭ್ಯಗಳು, ಮೂಲಭೂತ ಸೌಕರ್ಯಗಳು ಹಾಗೂ ಸರ್ಕಾರದ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.

ವೇದಿಕೆಯಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ರುದ್ರೇಶ ಘಾಳಿ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪೌರಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ, ಅವರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸ್ವಚ್ಛತೆಯ ಮೂಲಕ ಸಮಾಜದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಸೇವೆಯನ್ನು ಗೌರವಿಸುವ ಜೊತೆಗೆ, ಅವರ ಜೀವನಮಟ್ಟ ಸುಧಾರಣೆಗೆ ಆಡಳಿತ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...