⚡ಟ್ರೆಂಡಿಂಗ್

ಬಸವಕಲ್ಯಾಣ ಹಿಂದೂ ಸಮಾವೇಶದಲ್ಲಿ ಕನ್ನೇರಿ ಸ್ವಾಮೀಜಿ ಭಾಷಣಕ್ಕೆ ನಿರ್ಬಂಧ: ಹೈಕೋರ್ಟ್ ಆದೇಶ ಸ್ವಾಗತಿಸಿದ ಬಸವಲಿಂಗ ಪಟ್ಟದ್ದೇವರು


ಬಸವಕಲ್ಯಾಣ: ಈ ಹಿಂದೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅದೃಶ್ಯ ಕಾಡಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಕನ್ನೇರಿ ಸ್ವಾಮೀಜಿಯವರಿಗೆ ಜೂನ್ 28ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಲು ಹೈಕೋರ್ಟ್ ನಿರ್ಬಂಧ ಹೇರಿರುವ ನಿರ್ಧಾರವನ್ನು ಬಸವಲಿಂಗ ಪಟ್ಟದ್ದೇವರು ಸ್ವಾಗತಿಸಿದ್ದಾರೆ.

ಈ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವಾಗ ಯಾವುದೇ ಸಮುದಾಯ ಅಥವಾ ವ್ಯಕ್ತಿಗಳ ಭಾವನೆಗಳಿಗೆ ಧಕ್ಕೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ನ್ಯಾಯಾಲಯದ ಆದೇಶವು ಸಮಾಜದಲ್ಲಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳು ಮತ್ತು ಪರಸ್ಪರ ಗೌರವದ ಭಾವನೆ ಉಳಿಯಬೇಕು ಎಂದು ಹೇಳಿದರು.

ಸಭೆಯಲ್ಲಿ ಬಸವರಾಜ ಧನ್ನೂರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ, ಹೈಕೋರ್ಟ್ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು.

ನ್ಯೂ ವಿಜಯ ನ್ಯೂಸ್ ವರದಿ

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...