⚡ಟ್ರೆಂಡಿಂಗ್

ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ದೀಪಕ್ ಚಿಂಚೋರೆ ಶುಭಾಶಯ – ಪಕ್ಷ ಸಂಘಟನೆ ಬಲವರ್ಧನೆ ಕುರಿತು ಚರ್ಚೆ



ಬೆಂಗಳೂರು: ನೂತನ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಹುಬ್ಬಳ್ಳಿ–ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ್ ಚಿಂಚೋರೆ ಅವರು ಭೇಟಿ ಮಾಡಿ ಹೂಗುಚ್ಛ ನೀಡಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು ಎಂದು ದೀಪಕ್ ಚಿಂಚೋರೆ ತಿಳಿಸಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ನಿರಂತರವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ ತವಪ್ಪ ಅಷ್ಟಗಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವರದಿ: ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...