⚡ಟ್ರೆಂಡಿಂಗ್

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇಮೇಲ್: ಸಿಬ್ಬಂದಿ ಸ್ಥಳಾಂತರ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ..!

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇಮೇಲ್: ಸಿಬ್ಬಂದಿ ಸ್ಥಳಾಂತರ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ..!

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಪೊಲೀಸರು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ.

ಈ ಹಿಂದೆಯೂ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಇದೇ ರೀತಿಯ ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು. ಇದೀಗ ಮತ್ತೊಮ್ಮೆ ಬಂದಿರುವ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಇಮೇಲ್‌ನಲ್ಲಿ, “ನಿಮ್ಮ ನ್ಯಾಯಾಲಯದಲ್ಲಿ ಮಧ್ಯಾಹ್ನ 2 ಗಂಟೆಗೆ 23 ಸೈನೆಡ್ ವಾಯು ಗುಂಡುಗಳು ಸ್ಫೋಟಗೊಳ್ಳಲಿವೆ. ನಿನ್ನೆ ನಡೆದದ್ದು ಪರೀಕ್ಷೆಯ ಪ್ರಯತ್ನ, ಇಂದು ನಡೆಯುವುದು ನಿಜ” ಎಂದು ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಧಾರವಾಡ ಜಿಲ್ಲಾ ನ್ಯಾಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ.

ಬೆದರಿಕೆ ಇಮೇಲ್ ಕಳುಹಿಸಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...