⚡ಟ್ರೆಂಡಿಂಗ್

ಹಟ್ಟಿ ಚಿನ್ನದಗಣಿ ಹಿಂದೂ ಮಹೋತ್ಸವಕ್ಕೆ ತೆರಳದಂತೆ ನಿರ್ಬಂಧ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಮಂತ್ರಾಲಯದಲ್ಲೇ ತಡೆದ ಪೊಲೀಸರು


ರಾಯಚೂರು: ಹಟ್ಟಿ ಚಿನ್ನದಗಣಿಯಲ್ಲಿ ಆಯೋಜಿಸಲಾಗಿದ್ದ ಹಿಂದೂ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಮಂತ್ರಾಲಯದಲ್ಲೇ ತಡೆದಿರುವ ಘಟನೆ ನಡೆದಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಅವರನ್ನು ಕಾರ್ಯಕ್ರಮಕ್ಕೆ ತೆರಳದಂತೆ ನಿರ್ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಕ್ರಮದ ವಿರುದ್ಧ ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ತಡೆಯುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನೊಂದೆಡೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆಯ ಹಿನ್ನೆಲೆಯಲ್ಲಿ ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

ವರದಿ: ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...