⚡ಟ್ರೆಂಡಿಂಗ್

ಧಾರವಾಡ: ಸ್ವಾರ್ಥಕ್ಕೆ ಪರೀಕ್ಷೆ ತಯಾರಿಗೆ ಬಂದಿದ್ದ ಯುವಕ ಹೃದಯಾಘಾತಕ್ಕೆ ಬಲಿ


ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಮಾರುತಿ (25) ಎಂಬ ಯುವಕ ಮೃತಪಟ್ಟವರು ಎಂದು ತಿಳಿದುಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಕನಸು ಹೊತ್ತು ಅವರು ಧಾರವಾಡಕ್ಕೆ ಬಂದು ತರಬೇತಿ ಪಡೆಯುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಧಾರವಾಡದಲ್ಲೇ ಇದ್ದು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮಾರುತಿ, ರೂಮ್‌ನಲ್ಲಿ ವಾಸಿಸುತ್ತಿದ್ದರು. ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...