⚡ಟ್ರೆಂಡಿಂಗ್

ಡಿ.ಕೆ. ಶಿವಕುಮಾರ್ ಪ್ರಮಾಣ ವಚನ: ಹುಬ್ಬಳ್ಳಿಯ ಗಾಂಧಿವಾಡದಲ್ಲಿ ಸಂಭ್ರಮಾಚರಣೆ – ರಜತ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಬೃಹತ್ ಎಲ್‌ಇಡಿ ನೇರಪ್ರಸಾರ


ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಶ್ರೀ ರಜತ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ, ಶ್ರೀ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣವನ್ನು ಹುಬ್ಬಳ್ಳಿಯ ಗಾಂಧಿವಾಡದಲ್ಲಿ ಬೃಹತ್ ಎಲ್‌ಇಡಿ ಪರದೆಯ ಮೂಲಕ ನೇರಪ್ರಸಾರ ಮಾಡಲಾಯಿತು.

ಈ ವಿಶೇಷ ಕಾರ್ಯಕ್ರಮಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ನೂರಾರು ಕಾರ್ಯಕರ್ತರು ಸಾಕ್ಷಿಯಾದರು. ಪ್ರಮಾಣ ವಚನದ ಕ್ಷಣವನ್ನು ವೀಕ್ಷಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಬಣ್ಣದೋಕುಳಿ ಆಡಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪಯಣ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ನಾಯಕತ್ವವನ್ನು ಶ್ಲಾಘಿಸಿದರು. ರಾಜ್ಯದ ಅಭಿವೃದ್ಧಿಗೆ ಅವರ ನೇತೃತ್ವದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗಾಂಧಿವಾಡ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...