ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಯೂ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಶ್ರೀ ರಜತ ಉಳ್ಳಾಗಡ್ಡಿಮಠ ಕರೆ ನೀಡಿದರು.
ಶ್ರೀ ರಜತ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಕೋತಂಬ್ರಿ ಕಾಲೇಜು, ಕಾಡಸಿದ್ದೇಶ್ವರ ಕಾಲೇಜು ಹಾಗೂ ವಿದ್ಯಾನಗರದ ಕನಕದಾಸ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಜನೆಯ ಉದ್ದೇಶ, ಪ್ರಯೋಜನಗಳು ಹಾಗೂ ಸೌಲಭ್ಯ ಪಡೆಯುವ ಕುರಿತು ಮಾಹಿತಿ ನೀಡಲಾಯಿತು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.
ಸರ್ಕಾರ ನೀಡಿರುವ ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Post a Comment