⚡ಟ್ರೆಂಡಿಂಗ್

ಹಜರತ್ ಸೈಯದ್ ಪತೇಶಾವಲಿ ದರ್ಗಾದಲ್ಲಿ ನೂತನ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ವಿಶೇಷ ಪ್ರಾರ್ಥನೆ: ಮುಸ್ಲಿಂ ನಾಯಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ


ಹುಬ್ಬಳ್ಳಿ: ಹಜರತ್ ಸೈಯದ್ ಪತೇಶಾವಲಿ ದರ್ಗಾದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾದ ಶ್ರೀ ಶ್ರೀ ಡಿ.ಕೆ. ಶಿವಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ವೇಳೆ ಮುಸ್ಲಿಂ ಸಮುದಾಯದ ನಾಯಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವಂತೆ ಸಮುದಾಯದ ಮುಖಂಡರು ಆಗ್ರಹಿಸಿದರು.

ಪಾಲಿಕೆ ಸದಸ್ಯರಾದ ಶ್ರೀ ಆರಿಫ್ ಭದ್ರಾಪೂರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಮುಸ್ಲಿಂ ನಾಯಕರಾದ ಶ್ರೀ ಜಮೀರ್ ಅಹ್ಮದ್, ಶ್ರೀ ಸಲೀಂ ಅಹ್ಮದ್ ಹಾಗೂ ಶ್ರೀ ಎನ್.ಎ. ಹ್ಯಾರಿಸ್ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಯಿತು.

ರಾಜ್ಯ ರಾಜಕಾರಣದಲ್ಲಿ ಮುಸ್ಲಿಂ ಸಮುದಾಯದ ನಾಯಕರ ಕೊಡುಗೆ ಮಹತ್ವದ್ದಾಗಿದ್ದು, ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವುದು ಅಗತ್ಯವಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಮುಖಂಡರು, ರಾಜ್ಯದ ಅಭಿವೃದ್ಧಿಗಾಗಿ ಹಾಗೂ ಎಲ್ಲ ಸಮುದಾಯಗಳಿಗೆ ನ್ಯಾಯ ಸಿಗುವ ರೀತಿಯಲ್ಲಿ ನಾಯಕತ್ವ ಮುಂದುವರಿಯಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...