⚡ಟ್ರೆಂಡಿಂಗ್

ಮದುವೆ ಮಾಡಿಸಲಿಲ್ಲವೆಂದು ಮನನೊಂದು ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಮನೆಯಲ್ಲಿ ಮದುವೆ ಮಾಡಿಸುವ ವಿಚಾರವಾಗಿ ಉಂಟಾದ ಮನಸ್ತಾಪದಿಂದ ಯುವಕನೊಬ್ಬ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹುಬ್ಬಳ್ಳಿಯ ಸಾಯಿನಗರ ರೈಲ್ವೆ ಹಳಿ ಬಳಿ ನಡೆದಿದೆ.

ಮೃತ ಯುವಕನನ್ನು ಉಣಕಲ್ ಸಾಯಿನಗರ ನಿವಾಸಿ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಮನೆಯಲ್ಲಿ ಮದುವೆ ಮಾಡಿಸುವಂತೆ ಒತ್ತಾಯಿಸುತ್ತಿದ್ದ ಮಲ್ಲಿಕಾರ್ಜುನ, ಇದೇ ವಿಚಾರವಾಗಿ ಕುಟುಂಬಸ್ಥರೊಂದಿಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ.

ನಿನ್ನೆ ರಾತ್ರಿ ಮದುವೆ ವಿಚಾರಕ್ಕೆ ಮನನೊಂದು ಮನೆಯಿಂದ ಹೊರಹೋದ ಆತ, ಬಳಿಕ ಸಾಯಿನಗರದ ರೈಲ್ವೆ ಹಳಿಗೆ ಬಿದ್ದು ಜೀವ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. 

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...