⚡ಟ್ರೆಂಡಿಂಗ್

ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಗೆ ಶ್ರೀ ಕುಮಾರ ಹಕಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆ


ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆದ ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಮಹತ್ವದ ಸಭೆಯಲ್ಲಿ ಶ್ರೀ ಕುಮಾರ ಹಕಾರಿ ಅವರನ್ನು ಸಮಿತಿಯ ರಾಜ್ಯಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಯ್ಕೆ ಬಳಿಕ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಉತ್ತರ ಕಲ್ಯಾಣ ಕರ್ನಾಟಕದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ, ಜನರನ್ನು ಒಗ್ಗೂಡಿಸುವ ಮೂಲಕ ನಮ್ಮ ಗುರಿ ಸಾಧನೆಗಾಗಿ ನಿರಂತರ ಹೋರಾಟ ನಡೆಸುತ್ತೇವೆ” ಎಂದು ಹೇಳಿದರು.

ಉತ್ತರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ಜನರ ಹಕ್ಕುಗಳು ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ರೈತಪರ ಹೋರಾಟಗಾರ ಹಾಗೂ ಕನ್ನಡಪರ ಹೋರಾಟಗಾರ ಈರಪ್ಪ ಎಮ್ಮಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಮತ್ತು ಹಲವು ಹೋರಾಟಗಾರರು ಉಪಸ್ಥಿತರಿದ್ದರು.

ವರದಿ: ನ್ಯೂ ವಿಜಯ ನ್ಯೂಸ್

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...