⚡ಟ್ರೆಂಡಿಂಗ್

ಹುಬ್ಬಳ್ಳಿ ಬ್ರೇಕಿಂಗ್: ಶಾಸಕ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಅಭಿಮಾನಿಗಳ ಪ್ರತಿಭಟನೆ


ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಅಭಿಮಾನಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಇಂಡಿಪಂಪ್ ವೃತ್ತದಲ್ಲಿ ಜಮಾಯಿಸಿದ ಪ್ರಸಾದ್ ಅಬ್ಬಯ್ಯ ಬೆಂಬಲಿಗರು ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಳೆದ 30 ವರ್ಷಗಳಿಂದ ಮುಂಬೈ ಕರ್ನಾಟಕ ಭಾಗದಲ್ಲಿ ದಲಿತ ಸಮುದಾಯಕ್ಕೆ ಸೂಕ್ತ ಸಚಿವ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅಭಿಮಾನಿಗಳು, ದಲಿತ ಸಮುದಾಯದ ಕೋಟಾದಡಿ ಪ್ರಸಾದ್ ಅಬ್ಬಯ್ಯ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಮೊದಲ ಹಂತದಲ್ಲಿ ಅವಕಾಶ ಸಿಗದಿದ್ದರೂ, ಕನಿಷ್ಠ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿದ ಬಳಿಕ ಅಭಿಮಾನಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...