ಲಖನೌ: ಗೋವು ಭಾರತದ ಸಂಸ್ಕೃತಿ, ಪರಂಪರೆ ಮತ್ತು ನಂಬಿಕೆಯ ಪ್ರತೀಕವಾಗಿದ್ದು, ಅದು ಈಗಾಗಲೇ ಜನರ ಮನಸ್ಸಿನಲ್ಲಿ ರಾಷ್ಟ್ರೀಯ ಪ್ರಾಣಿಯ ಸ್ಥಾನ ಪಡೆದಿದೆ. ಆದ್ದರಿಂದ ಅದನ್ನು ಅಧಿಕೃತವಾಗಿ ಘೋಷಿಸುವ ಅಗತ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಗೋವು ಕೇವಲ ಪ್ರಾಣಿ ಮಾತ್ರವಲ್ಲ, ಭಾರತೀಯ ಜೀವನ ಪದ್ಧತಿ ಮತ್ತು ಕೃಷಿ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಶತಮಾನಗಳಿಂದ ಜನರು ಗೋವನ್ನು ಗೌರವಿಸುತ್ತಾ ಬಂದಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೋ ಸಂರಕ್ಷಣೆ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ, ಗೋವುಗಳ ರಕ್ಷಣೆ ಮತ್ತು ಪೋಷಣೆ ಸಮಾಜದ ಜವಾಬ್ದಾರಿಯಾಗಿದೆ. ಸರ್ಕಾರವೂ ಗೋಶಾಲೆಗಳ ಅಭಿವೃದ್ಧಿ ಮತ್ತು ಗೋಸಂರಕ್ಷಣೆಗೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ ಅವರ ಈ ಹೇಳಿಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲವರು ಇದನ್ನು ಸ್ವಾಗತಿಸಿದರೆ, ಮತ್ತಿತರರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂ ವಿಜಯ ನ್ಯೂಸ್
Post a Comment