⚡ಟ್ರೆಂಡಿಂಗ್

ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ರಜತ ಉಳ್ಳಾಗಡ್ಡಿಮಠ ಭೇಟಿ: ಶುಭಾಶಯ ಸಲ್ಲಿಕೆ


ಬೆಂಗಳೂರು: ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ರಜತ ಉಳ್ಳಾಗಡ್ಡಿಮಠ ಅವರು ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಶುಭ ಕೋರಿದರು.

ಇದೇ ವೇಳೆ ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಹಾಗೂ ರಾಜ್ಯ ಸರ್ಕಾರದ ಹಿರಿಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ನಿವಾಸಕ್ಕೂ ಭೇಟಿ ನೀಡಿದ ರಜತ ಉಳ್ಳಾಗಡ್ಡಿಮಠ ಅವರು, ನೂತನ ಜವಾಬ್ದಾರಿಗಳಿಗೆ ಅಭಿನಂದನೆ ಸಲ್ಲಿಸಿ ರಾಜಕೀಯ ಹಾಗೂ ಸಂಘಟನಾ ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ಪಕ್ಷದ ಬಲವರ್ಧನೆ, ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಕೋಶದ ನಿರ್ದೇಶಕರಾದ ಮಲ್ಲಿಕಾರ್ಜುನ ಕಲಾದಗಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...