⚡ಟ್ರೆಂಡಿಂಗ್

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ ಕಾಮೆಂಟ್: ವ್ಯಕ್ತಿ ಬಂಧನ


ಕಾರ್ಕಳ: ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾರ್ಕಳ ತಾಲೂಕಿನ ಕೆರ್ವಾಶೆ ನಿವಾಸಿ ಸುಧೀರ್ ಬಂಗೇರ (48) ಎಂದು ಗುರುತಿಸಲಾಗಿದೆ.

‘ನಮ್ಮ ಕಾರ್ಲ’ ಫೇಸ್‌ಬುಕ್ ಪುಟದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಪ್ರಕಟವಾಗಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಆರೋಪಿ, ಸಚಿವರ ಜಾತಿಯನ್ನು ಉಲ್ಲೇಖಿಸಿ ಅವಹೇಳನಕಾರಿ ಪದ ಬಳಸಿ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಸುರೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸಂಬಂಧಿತ ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡುವವರು ಹಾಗೂ ಅವಹೇಳನಕಾರಿ, ದ್ವೇಷಪೂರಿತ ಕಾಮೆಂಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ಬಂಧನವಾಗಿದ್ದು, ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ.

ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...