⚡ಟ್ರೆಂಡಿಂಗ್

🔴 ನ್ಯೂ ವಿಜಯ ನ್ಯೂಸ್ | ಕ್ರೈಂ ಬ್ರೇಕಿಂಗ್

ಮಂತ್ರವಾದ ಮಾಡುತ್ತಿದ್ದಾನೆಂದು ಶಂಕೆ: ಯುವಕನ ಬರ್ಬರ ಹತ್ಯೆ..!

ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟುಹಾಕಿದ ಗ್ರಾಮಸ್ಥರು

ಆಂಧ್ರ ಪ್ರದೇಶ: ಮಂತ್ರವಾದ ಮಾಡುತ್ತಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 30 ವರ್ಷದ ಯುವಕನನ್ನು ಗ್ರಾಮಸ್ಥರು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಪಾರ್ವತೀಪುರಂ ಮನ್ಯಂ ಜಿಲ್ಲೆಯ ವೆಲಗವಲಸ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ರಮೇಶ್ ಎಂದು ಗುರುತಿಸಲಾಗಿದೆ. ಮಂತ್ರವಾದ ಮಾಡುತ್ತಿದ್ದಾನೆ ಎಂಬ ಶಂಕೆಯಿಂದ ಕೆಲವರು ರಮೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಆತನನ್ನು ಮನೆಯಿಂದ ಹೊರಗೆ ಕರೆಸಿ ಹಲ್ಲೆ ನಡೆಸಿ, ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಕಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರಮೇಶ್ ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೂಢನಂಬಿಕೆಯ ಹೆಸರಿನಲ್ಲಿ ನಡೆದ ಈ ಕ್ರೂರ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇಂತಹ ಘಟನೆಗಳನ್ನು ತಡೆಯಲು ಜಾಗೃತಿ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

🎙️ ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...