ಕಾರ್ಯಕ್ರಮವನ್ನು ಕೆಪಿಸಿಸಿಯ ಮಾನ್ಯ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಉದ್ಘಾಟಿಸಿ ಮಾತನಾಡಿದರು. ಸಂಘಟನೆಯ ಬಲವರ್ಧನೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಈ ಸಮಾವೇಶದಲ್ಲಿ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಶಾಸಕರು, ಮುಂಚೂಣಿ ಘಟಕಗಳ ಅಧ್ಯಕ್ಷರು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
Post a Comment