⚡ಟ್ರೆಂಡಿಂಗ್

ಬೆಳಗಾವಿ ವಿಭಾಗ ಮಟ್ಟದ ಎಸ್‌ಐಆರ್ ಜನಜಾಗೃತಿ ಸಮಾವೇಶಕ್ಕೆ ಬಿ.ಕೆ. ಹರಿಪ್ರಸಾದ್ ಚಾಲನೆ

ಹುಬ್ಬಳ್ಳಿ: ಹುಬ್ಬಳ್ಳಿಯ ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ ಎಸ್‌ಐಆರ್ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕೆಪಿಸಿಸಿಯ ಮಾನ್ಯ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಉದ್ಘಾಟಿಸಿ ಮಾತನಾಡಿದರು. ಸಂಘಟನೆಯ ಬಲವರ್ಧನೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಮಾವೇಶದಲ್ಲಿ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಶಾಸಕರು, ಮುಂಚೂಣಿ ಘಟಕಗಳ ಅಧ್ಯಕ್ಷರು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...