⚡ಟ್ರೆಂಡಿಂಗ್

ಬಡವರ ಮೇಲೆ ಬ್ರಹ್ಮಾಸ್ತ್ರ: ಹುಬ್ಬಳ್ಳಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಅಂಗಡಿ ತೆರವು – ಪಾಲಿಕೆ ಕ್ರಮಕ್ಕೆ ವ್ಯಾಪಾರಸ್ಥರ ಆಕ್ರೋಶ



ಹುಬ್ಬಳ್ಳಿ: ನಗರದ ವಿವಿಧ ಭಾಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಕಿಕೊಂಡಿದ್ದ ಅಂಗಡಿ ಹಾಗೂ ತಾತ್ಕಾಲಿಕ ಶೆಡ್‌ಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನೆಲೆ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅತಿಕ್ರಮಣವಾಗಿದೆ ಎಂಬ ಕಾರಣ ನೀಡಿ ಪಾಲಿಕೆ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದ್ದು, ಹಲವು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ಹೊಡೆತ ಬಿದ್ದಿದೆ ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

"ದೊಡ್ಡವರ ಅತಿಕ್ರಮಣಗಳ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳು, ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವ ಬಡವರ ಮೇಲೆ ಮಾತ್ರ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ" ಎಂದು ಬೀದಿ ವ್ಯಾಪಾರಿಗಳು ಆರೋಪಿಸಿದ್ದಾರೆ.

ದಿನನಿತ್ಯದ ಆದಾಯದ ಮೇಲೆ ಬದುಕು ಸಾಗಿಸುವ ಕುಟುಂಬಗಳು ಈ ಕ್ರಮದಿಂದ ಸಂಕಷ್ಟಕ್ಕೆ ಸಿಲುಕಿವೆ. ಪರ್ಯಾಯ ಸ್ಥಳ ಕಲ್ಪಿಸದೆ ಅಂಗಡಿಗಳನ್ನು ತೆರವು ಮಾಡಿರುವುದು ಅನ್ಯಾಯ ಎಂದು ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಬೀದಿ ವ್ಯಾಪಾರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಜೀವನೋಪಾಯಕ್ಕೂ ಧಕ್ಕೆ ಆಗದಂತೆ ಆಡಳಿತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ನ್ಯೂ ವಿಜಯ್ ನ್ಯೂಸ್ | ಹುಬ್ಬಳ್ಳಿ

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...