ಹುಬ್ಬಳ್ಳಿ: ಮುಂಬರುವ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ಆಯೋಜಿಸಲಾಯಿತು.
ಕು. ಶೃತಿ ಎನ್.ಎಸ್ IPS, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊಹರಂ ಆಚರಣೆ ವೇಳೆ ಎಲ್ಲ ಸಮುದಾಯದವರು ಪರಸ್ಪರ ಸೌಹಾರ್ದತೆ, ಸಹಕಾರ ಹಾಗೂ ಶಾಂತಿಯಿಂದ ಹಬ್ಬ ಆಚರಿಸುವಂತೆ ಮನವಿ ಮಾಡಲಾಯಿತು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹರಡುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದರು.
ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ವಿವಿಧ ಧರ್ಮಗಳ ಮುಖಂಡರು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಶಾಂತಿಯುತ ಮೊಹರಂ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ನ್ಯೂ ವಿಜಯ ನ್ಯೂಸ್ | ಹುಬ್ಬಳ್ಳಿ
Post a Comment