ನವದೆಹಲಿ/ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಖಾಲಿ ಇರುವ ಏಳು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಚರ್ಚೆಯ ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಟ್ಟಿಯಲ್ಲಿ ತಿಪ್ಪಣ್ಣಪ್ಪ ಕಮಕನೂರು ಹಾಗೂ ಪಿ.ವಿ. ಮೋಹನ್ ಅವರ ಹೆಸರು ಸೇರಿದೆ.
ಪಕ್ಷ ಸಂಘಟನೆಗೆ ನೀಡಿದ ಕೊಡುಗೆ, ಅನುಭವ ಹಾಗೂ ಸಾಮಾಜಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ತಿಳಿದುಬಂದಿದೆ.
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಉಳಿದ ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಕುತೂಹಲ ಮುಂದುವರಿದಿದೆ.
ನ್ಯೂ ವಿಜಯ ನ್ಯೂಸ್ | ಬೆಂಗಳೂರು
Post a Comment