ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಮಿತಿಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ.
ಪಕ್ಷದ ಸಂಘಟನೆ ಹಾಗೂ ಆಡಳಿತ ಅನುಭವವನ್ನು ಪರಿಗಣಿಸಿ ಸಿದ್ದರಾಮಯ್ಯ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ. ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಈ ನಿರ್ಧಾರದಿಂದ ರಾಷ್ಟ್ರೀಯ ಮಟ್ಟದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಮತ್ತಷ್ಟು ಹೆಚ್ಚಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಕ್ಷದ ನೀತಿ ನಿರ್ಧಾರಗಳು, ರಾಜಕೀಯ ತಂತ್ರಗಳು ಹಾಗೂ ಪ್ರಮುಖ ವಿಚಾರಗಳ ಬಗ್ಗೆ ತೀರ್ಮಾನ ಕೈಗೊಳ್ಳುವ ಪ್ರಮುಖ ವೇದಿಕೆಯಾಗಿದೆ.
Post a Comment