ನಕಾಶೆಯ ಕಾಲು ದಾರಿ ಮತ್ತು ಬಂಡಿ ದಾರಿ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ
ಕೆಜಿಎಫ್: ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಮರದಘಟ್ಟ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ಸಂಚರಿಸಲು ಇರುವ ನಕಾಶೆಯ ಕಾಲು ದಾರಿ ಹಾಗೂ ಬಂಡಿ ದಾರಿಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ತೆರವುಗೊಳಿಸಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ.) ಕೆಜಿಎಫ್ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಮಾನ್ಯ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ರೈತರು ತಮ್ಮ ಜಮೀನುಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ನಕಾಶೆಯಲ್ಲಿರುವ ಸಾರ್ವಜನಿಕ ದಾರಿಗಳನ್ನು ತೆರವುಗೊಳಿಸಬೇಕು. ಸಮಸ್ಯೆ ಪರಿಹಾರವಾಗದಿದ್ದರೆ ಮುಂದಿನ ದಿನಗಳಲ್ಲಿ ಕಾನೂನುಬದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷ ಸೋಮಸುಂದರ್ ರೆಡ್ಡಿ, ಕೆಜಿಎಫ್ ತಾಲ್ಲೂಕು ಅಧ್ಯಕ್ಷ ತ್ರಿಲೋಕ್ ಕೆ.ಎಂ., ಉಪಾಧ್ಯಕ್ಷ ಯಾದವ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಇರ್ಷಾದ್ ಅಹ್ಮದ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಕೃಷ್ಣ ರೆಡ್ಡಿ, ಮುನಿರತ್ನಪ್ಪ, ಜಯರಾಮ ರೆಡ್ಡಿ ಹಾಗೂ ಶ್ರೀಮತಿ ಭಾರತಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
إرسال تعليق