⚡ಟ್ರೆಂಡಿಂಗ್

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು ವಕೀಲರ ಕರ್ತವ್ಯ : ನ್ಯಾಯಮೂರ್ತಿ ಎಚ್.ಪಿ. ಸಂದೇಶ


ಧಾರವಾಡ : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ದೊಡ್ಡ ಜವಾಬ್ದಾರಿ ವಕೀಲರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತ ನ್ಯಾಯಾಧೀಶ ಎಚ್.ಪಿ. ಸಂದೇಶ ಹೇಳಿದರು.

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಕಾನೂನು ಕಾಲೇಜು ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ “ತರಗತಿಯಿಂದ ನ್ಯಾಯಾಲಯದ ಕೋಣೆಗೆ” 4ನೇ ವಲಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದಲ್ಲಿ ವಕೀಲ ವೃತ್ತಿಗೆ ಪ್ರವೇಶಿಸುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಬೇಕು. ಸಮಾಜದ ನೊಂದವರು, ಬಡವರು, ವಿಧವೆಯರು ಹಾಗೂ ಶೋಷಿತರ ಪರವಾಗಿ ನಿಂತು ಅವರ ಹಕ್ಕುಗಳ ರಕ್ಷಣೆಗೆ ಶ್ರಮಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾನೂನು ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಸಮಾಜದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿ, ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಸಿಗಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬ ಅರಿವು ಮೂಡಿದಾಗ ಮಾತ್ರ ಸಮಾಜ

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...