ಪೇಪರ್ ಲೀಕ್ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಪೊಲೀಸರು ತಡೆದ ಘಟನೆ ವಿವಾದಕ್ಕೆ ಕಾರಣವಾಗಿದೆ.
ಸುದ್ದಿಗೋಷ್ಠಿ ನಡೆಸದಂತೆ ಪೊಲೀಸರು ತಡೆಯಲು ಬಂದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಜಯ್ ಸಿಂಗ್, “ಪೇಪರ್ ಲೀಕ್ ಕುರಿತು ಮಾತನಾಡುವುದೇ ತಪ್ಪಾ? ಲಕ್ಷಾಂತರ ಮಕ್ಕಳ ಭವಿಷ್ಯದ ಬಗ್ಗೆ ಧ್ವನಿ ಎತ್ತಬಾರದಾ?” ಎಂದು ಪೊಲೀಸರನ್ನು ಪ್ರಶ್ನಿಸಿದರು.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಬಗ್ಗೆ ಜನಪ್ರತಿನಿಧಿಗಳು ಮಾತನಾಡುವುದನ್ನು ತಡೆಯುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸರು ಮತ್ತು ಸಂಜಯ್ ಸಿಂಗ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಸುದ್ದಿಗೋಷ್ಠಿ ತಡೆಯಲು ಬಂದ ಪೊಲೀಸರ ಕ್ರಮದ ವಿರುದ್ಧ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪೇಪರ್ ಲೀಕ್ ಪ್ರಕರಣದಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಉಂಟಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಪ್ ನಾಯಕರು ಆಗ್ರಹಿಸಿದ್ದಾರೆ.
Post a Comment