⚡ಟ್ರೆಂಡಿಂಗ್

ಗುಟ್ಕಾ, ಪಾನ್ ಮಸಾಲಾದಲ್ಲಿ ಡ್ರಗ್ಸ್ ಪತ್ತೆಯಾದರೆ ಸಂಪೂರ್ಣ ನಿಷೇಧ: ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು, ಜೂ.29: ಕರ್ನಾಟಕದಲ್ಲಿ ಮಾರಾಟವಾಗುವ ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು ಉತ್ಪನ್ನಗಳಲ್ಲಿ ಮಾದಕ ದ್ರವ್ಯಗಳು (ಡ್ರಗ್ಸ್) ಇರುವುದು ಪತ್ತೆಯಾದರೆ ಅಂತಹ ಉತ್ಪನ್ನಗಳನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) 31ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಮಾರಾಟವಾಗುವ ಪಾನ್ ಮಸಾಲಾ ಮತ್ತು ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. ಯಾವುದೇ ಉತ್ಪನ್ನದಲ್ಲಿ ಮಾದಕ ದ್ರವ್ಯಗಳು ಪತ್ತೆಯಾದರೆ ಅಂತಹ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡುವುದರ ಜೊತೆಗೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಯುವಜನರನ್ನು ಮಾದಕ ವ್ಯಸನದಿಂದ ದೂರವಿಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...