⚡ಟ್ರೆಂಡಿಂಗ್

ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಮಹತ್ವದ ಸಭೆ


ಹುಬ್ಬಳ್ಳಿ: ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಬೇಡಿಕೆ ಕುರಿತು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ವತಿಯಿಂದ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ.

ಶನಿವಾರ ದಿನಾಂಕ 13-06-2026 ರಂದು ಮಧ್ಯಾಹ್ನ 2:30 ಗಂಟೆಗೆ ಹುಬ್ಬಳ್ಳಿಯ ಐ.ಬಿ (IB) ಯಲ್ಲಿ ಸಭೆ ನಡೆಯಲಿದ್ದು, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಹೋರಾಟದ ಬೆಂಬಲಿಗರು ಭಾಗವಹಿಸುವಂತೆ ಶ್ರೀ ಕುಮಾರ ಹಕಾರೆ ಅವರು ಕರೆನೀಡಿದರು 

ಉತ್ತರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಕಾರ್ಯತಂತ್ರಗಳ ಬಗ್ಗೆಯೂ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮನವಿ ಮಾಡಿದೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...