⚡ಟ್ರೆಂಡಿಂಗ್

ತಡಸಿನಕೊಪ್ಪ ಶೂಟೌಟ್ ಪ್ರಕರಣ: ಕೊನೆಗೂ ಖಾಕಿ ಬಲೆಗೆ ಬಿದ್ದ ಪ್ರಮುಖ ಆರೋಪಿ ಸುಂದರ್ ಪೌಲ್!

ತಡಸಿನಕೊಪ್ಪ ಶೂಟೌಟ್ ಪ್ರಕರಣ: ಕೊನೆಗೂ ಖಾಕಿ ಬಲೆಗೆ ಬಿದ್ದ ಪ್ರಮುಖ ಆರೋಪಿ ಸುಂದರ್ ಪೌಲ್!

ಹುಬ್ಬಳ್ಳಿ: ತಡಸಿನಕೊಪ್ಪ ಶೂಟೌಟ್ ಪ್ರಕರಣದಲ್ಲಿ ಪೊಲೀಸರ ನಿದ್ದೆ ಕೆಡಿಸಿದ್ದ ಪ್ರಮುಖ ಆರೋಪಿ ಸುಂದರ್ ಪೌಲ್ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಹಲವು ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ವಿವಾದಿತ ಜಮೀನು ವಿಚಾರವಾಗಿ ನಡೆದ ಗಲಾಟೆ ಕ್ಷಣಾರ್ಧದಲ್ಲೇ ಗುಂಡಿನ ದಾಳಿಗೆ ತಿರುಗಿ ಸ್ಥಳೀಯರಲ್ಲಿ ಭಾರೀ ಆತಂಕ ಸೃಷ್ಟಿಸಿತ್ತು. ಘಟನೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ಎನ್ನಲಾದ ಸುಂದರ್ ಪೌಲ್ ಮಾತ್ರ ಬಂಧನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.

ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿಕೊಳ್ಳಲು ಆರೋಪಿ ಬೆಂಗಳೂರು, ಕೊಡೈಕೆನಾಲ್, ಗೋವಾ, ಜಾರ್ಖಂಡ್, ಓಡಿಶಾ, ಸಿಲಿಗುರಿ, ಗೋರಖಪುರ, ವಾರಾಣಸಿ ಸೇರಿದಂತೆ ಹಲವು ಕಡೆ ಸಂಚರಿಸಿದ್ದಲ್ಲದೆ ನೇಪಾಳದವರೆಗೂ ತೆರಳಿದ್ದಾನೆ ಎನ್ನಲಾಗಿದೆ.

ಆದರೆ ಎಷ್ಟೇ ಸ್ಥಳ ಬದಲಾಯಿಸಿದರೂ ಖಾಕಿ ಪಡೆ ನಡೆಸಿದ ನಿರಂತರ ಕಾರ್ಯಾಚರಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಿಶೇಷ ಪೊಲೀಸ್ ತಂಡದ ನಿರಂತರ ಹುಡುಕಾಟದ ಫಲವಾಗಿ ತಮಿಳುನಾಡಿನ ನಾಗಪಟ್ಟಣಂನಲ್ಲಿ ಗುರುತು ಮರೆಮಾಚಿ ತಂಗಿದ್ದ ಸುಂದರ್ ಪೌಲ್‌ನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ವಶಕ್ಕೆ ಪಡೆದು ಕರೆತಂದಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

ಪೊಲೀಸರ ನಿರಂತರ ಕಾರ್ಯಾಚರಣೆಗೆ ಕೊನೆಗೂ ಯಶಸ್ಸು ಸಿಕ್ಕಿದ್ದು, ತಡಸಿನಕೊಪ್ಪ ಶೂಟೌಟ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...