⚡ಟ್ರೆಂಡಿಂಗ್

ಎಐಸಿಸಿ ಕಾರ್ಯದರ್ಶಿ ದಿವಂಗತ ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಜಮೀರ್ ಅಹ್ಮದ್


ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ದಿವಂಗತ ಶ್ರೀ ಸೂರಜ್ ಹೆಗ್ಡೆ ಅವರ ಬೆಂಗಳೂರಿನ ನಿವಾಸಕ್ಕೆ ಮಾಜಿ ಸಚಿವರಾದ ಶ್ರೀ ಬಿ.ಝಡ್. ಜಮೀರ್ ಅಹ್ಮದ್ ಅವರು ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ದಿವಂಗತ ಸೂರಜ್ ಹೆಗ್ಡೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಮೀರ್ ಅಹ್ಮದ್ ಅವರು ಸಾಂತ್ವನ ಹೇಳಿ, ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ್ ಚಿಂಚೋರೆ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾದ ಶ್ರೀ ಅಜ್ಜಂಪೀರ್ ಖಾದ್ರಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದು, ದಿವಂಗತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

– ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...